Home » Kannada News » ರಾಜ್ಯದಲ್ಲಿ ವಾಡಿಕೆಗಿಂತ 48% ಮಳೆ ಕೊರತೆ: ಹೀಗೇ ಮುಂದುವರಿದರೆ ಕೃಷಿಗೆ ತೊಂದರೆ

ರಾಜ್ಯದಲ್ಲಿ ವಾಡಿಕೆಗಿಂತ 48% ಮಳೆ ಕೊರತೆ: ಹೀಗೇ ಮುಂದುವರಿದರೆ ಕೃಷಿಗೆ ತೊಂದರೆ

ಹೈಲೈಟ್ಸ್‌:

  • ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಮುಂಗಾರು ದುರ್ಬಲ
  • ವಾಡಿಕೆಗಿಂತ ಶೇ.48ರಷ್ಟು ಮಳೆ ಕೊರತೆ
  • ಮಳೆ ಕೊರತೆ ಮುಂದುವರಿದರೆ ಕೃಷಿ ಕ್ಷೇತ್ರಕ್ಕೆ ತೊಡಕು

ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ಮುಂಗಾರು ದುರ್ಬಲಗೊಂಡಿರುವ ಹಿನ್ನೆಲೆಯಲ್ಲಿ ವಾಡಿಕೆಗಿಂತ ಶೇ.48ರಷ್ಟು ಮಳೆ ಕೊರತೆ ಉಂಟಾಗಿದೆ. ಆ.1ರಿಂದ 15ರವರೆಗಿನ ಅವಧಿಯಲ್ಲಿ ರಾಜ್ಯಾದ್ಯಂತ ಮಳೆ ಕೊರತೆ ಮುಂದುವರಿದಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ.

ಮಳೆ ಕೊರತೆ ಇದೇ ರೀತಿ ಮುಂದುವರಿದರೆ, ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಉಂಟಾಗಲಿದೆ. ಈಗಾಗಲೇ ಕೆಲವೆಡೆ ಅತಿವೃಷ್ಟಿ ಹಾಗೂ ಪ್ರವಾಹದಿಂದ ಸಾಕಷ್ಟು ಬೆಳೆ ಹಾನಿ ಉಂಟಾಗಿದೆ. ಕೆಲವೆಡೆ ಮಳೆ ಅಭಾವದಿಂದ ಬೆಳೆಗಳು ಒಣಗುತ್ತಿವೆ.

ಮಳೆಯಿಂದ ಅತೀವೃಷ್ಟಿ; ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಸರ್ಕಾರ; ಯಾರ್ಯಾರಿಗೆ ಎಷ್ಟೆಷ್ಟು? ಇಲ್ಲಿದೆ ವಿವರ

ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಕಳೆದೆರಡು ವಾರಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನಲ್ಲಿ ಶೇ.20ರಷ್ಟು , ಉತ್ತರ ಒಳನಾಡಿನಲ್ಲಿ ಶೇ.63ರಷ್ಟು , ಮಲೆನಾಡಿನಲ್ಲಿ ಶೇ.45ರಷ್ಟು ಹಾಗೂ ಕರಾವಳಿ ಭಾಗದಲ್ಲಿ ಶೇ.46ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಕಳೆದ ಒಂದು ವಾರದಲ್ಲಿ ದಕ್ಷಿಣ ಒಳನಾಡನ್ನು ಹೊರತುಪಡಿಸಿ ಉಳಿದೆಲ್ಲ ಭಾಗಗಳಲ್ಲಿ ವಾಡಿಕೆಗಿಂತ ಅಂದರೆ ಶೇ.60ಕ್ಕಿಂತ ಹೆಚ್ಚು ಮಳೆ ಕೊರತೆ ಉಂಟಾಗಿದೆ. ಒಟ್ಟಾರೆ ರಾಜ್ಯದಲ್ಲಿ ಶೇ.60ರಷ್ಟು ಮಳೆ ಕೊರತೆ ಉಂಟಾಗಿದೆ.

ಜೂನ್‌ 1ರಿಂದ ಆ.15ರವರೆಗಿನ ಅವಧಿಯಲ್ಲೂ ರಾಜ್ಯದಲ್ಲಿ ಶೇ.7ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಅದರಲ್ಲೂ ಅತಿ ಹೆಚ್ಚು ಮಳೆಯಾಗುವ ಮಲೆನಾಡು ಭಾಗದಲ್ಲಿ ಶೇ.18 ಹಾಗೂ ಕರಾವಳಿ ಭಾಗದಲ್ಲಿ ಶೇ.19ರಷ್ಟು ಮಳೆ ಕೊರತೆಯಾಗಿದೆ.

ರಾಜ್ಯದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಈವರೆಗೆ 2 ಲಕ್ಷ ಹೆಕ್ಟೇರ್‌ ಬೆಳೆ ನಾಶ..!

ಉತ್ತಮ ಮಳೆಯ ಲಕ್ಷಣಗಳಿಲ್ಲ
ಹವಾಮಾನ ಇಲಾಖೆಯ ಪ್ರಕಾರ, ಸದ್ಯಕ್ಕೆ ರಾಜ್ಯಕ್ಕೆ ಉತ್ತಮ ಮಳೆಯಾಗುವ ಲಕ್ಷಣಗಳಿಲ್ಲ. ಆದರೆ ಚದುರಿದಂತೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ.

ಈ ನಡುವೆ, ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಎರಡು-ಮೂರು ದಿನ ಸಾಧಾರಣ ಮಳೆಯಾಗುವ ಸಂಭವವಿದೆ.


Source link

x

Check Also

ಶಾಲೆಗಳಲ್ಲಿ ಕಲಿಸುತ್ತಾರೆ ಜೀವನ ಪಾಠ..! ಶ್ರೀನಾಥ್ ಭಲ್ಲೆ ಅಮೆರಿಕ ಅನುಭವ ಕಥನ – ಭಾಗ 23

ಈ ದೇಶಕ್ಕೆ ಬಂದ ಆರಂಭದಲ್ಲೇ ನಮ್ಮ ಕಂಪನಿಯವರು ಅಮೆರಿಕನ್ ಆಂಗ್ಲದ ಪರಿಚಯ ಮಾಡಿಸಲೆಂದೇ ESL – English as Second ...